ಹೊಸದಿಗಂತ ವರದಿ ಚಿಕ್ಕಮಗಳೂರು :
ಮಲೆನಾಡಿನಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲೂಕುಗಳ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಅಂಗನವಾಡಿಗಳಿಗೆ ಜುಲೈ 4 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜು ಅವರು ಆದೇಶಿಸಿದ್ದಾರೆ.
ಚಿಕ್ಕಮಗಳೂರು, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಹಾಗೂ ಮೂಡಿಗೆರೆ ತಾಲೂಕಿಗೆ ರಜೆ ಅನ್ವಯಿಸಲಿದೆ.