Tuesday, August 16, 2022

Latest Posts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ಡಿಸಿ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಭಾರೀ ಮಳೆ ಸುರಿಯುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮುಂದಿನ 2 ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ಜಿದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ‌.ವಿ.ರಾಜೇಂದ್ರ ಮನವಿ ಮಾಡಿದ್ದಾರೆ.
ಕುಮಾರಧಾರ ನದಿ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯಕ್ಕೆ ನೀರು ನುಗ್ಗಿದ್ದು ಇದರ ನಡುವೆ ನಾಳೆ ನಾಗರ ಪಂಚಮಿ ಇದ್ದು, ಈ ಹಿನ್ನೆಲೆ ದೇವಾಲಯಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 2 ಮತ್ತು 3 ರಂದು ಜಿಲ್ಲಾಡಳಿತ ಭೇಟಿ ನೀಡದಂತೆ ಮನವಿ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss