October 11, 2026
Sunday, October 11, 2026
spot_img

ಕಾರ್ಮೋಡಕ್ಕೆ ಕಂಗಾಲಾದ ರಾಜಧಾನಿ: ಬೆಂಗಳೂರಿನಲ್ಲಿ ಜಡಿಮಳೆಗೆ ಸಂಚಾರ, ಜನಜೀವನ ಅಸ್ತವ್ಯಸ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ಜೋರು ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ಓಡಾಟ ತುಸು ಕಷ್ಟವಾಗಿದೆ.

ಮುಂಗಾರು ಚುರುಕಾಗಿದ್ದು, ನಿತ್ಯವೂ ಸಂಜೆಯಾಗುತ್ತಿದ್ದಂತೆ ಇಡೀ ವಾತಾವರಣವೇ ಬದಲಾಗುತ್ತಿದೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ಮಳೆ ಸುರಿಯುತ್ತಿದ್ದು, ವಾಹನಗಳು ನಿಧಾನಗತಿಯಲ್ಲಿ ಸಾಗಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್, ಕೋರಮಂಗಲ, ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಜಯನಗರ, ಜೆ.ಪಿ. ನಗರ, ಶಿವಾನಂದ ಸರ್ಕಲ್, ಗಾಂಧಿನಗರ ಬಜಾರ್, ಲಾಲ್ ಬಾಗ್, ಚಿಕ್ಕಪೇಟೆ ಸುತ್ತಮುತ್ತ ಮತ್ತು ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಮಳೆರಾಯ ಆರ್ಭಟಿಸಿದೆ. ಮಳೆಯಿಂದಾಗಿ ಗಾಂಧಿ ಬಜಾರ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

Must Read