ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭೂ ಕುಸಿತ, ಗುಡ್ಡ ಕುಸಿತದಿಂದ ದುರಂತ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಸಮಗ್ರ ಮಾಹಿತಿ ಸಂಗ್ರಹಿಸಿರುವ ಸಿಎಂ ಸಿದ್ದರಾಮಯ್ಯ ಅವರು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಸಕ್ತ ವರ್ಷ ರಾಜ್ಯದಲ್ಲಿ ಹಲವೆಡೆ ಮಳೆ ಬೀಳುತ್ತಿದ್ದು, ಇದರಿಂದ ಹಲವೆಡೆ ಸಂಚಾರ ಹಾಗೂ ದೈನಂದಿನ ಬದುಕಿಗೆ ಸಾರ್ವಜನಿಕರಿಗೆ ಸಂಕಷ್ಟ ಎದುರಾಗಿದೆ. ಇವುಗಳನ್ನು ಪರಿಹರಿಸುವ ಜೊತೆಗೆ ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬೇಕಿರುವ ಕ್ರಮಗಳು ಮತ್ತು ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜತೆ ನಡೆಸಿದ ಸಿಎಂ ಸಭೆ ನಡೆಸಿ, ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.