October 13, 2026
Tuesday, October 13, 2026
spot_img

ಭಾರೀ ಮಳೆ ಎಫೆಕ್ಟ್: ದಕ್ಷಿಣ ಕನ್ನಡದ ಹಲವು ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 8ರಂದು ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್‌ 8 ರಂದು ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಅಂಗನವಾಡಿ ಹಾಗೂ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯವಾಗಿದೆ.

ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಇತರ ಸಾರ್ವಜನಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಶಾಲೆ-ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ನದಿ, ಹೊಳೆ, ಕೆರೆ ಹಾಗೂ ಜಲಾಶಯಗಳ ಬಳಿ ಸಾರ್ವಜನಿಕರು ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Must Read