ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜುಲೈ.31ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಜುಲೈ.31ರವರೆಗೆ ಕರ್ನಾಟಕದಲ್ಲಿ ವರುಣ ಆರ್ಭಟಿಸಲಿದ್ದಾನೆ. ಮುಂದಿನ ಎರಡು ದಿನ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಆರೇಂಜ್ ಅಲರ್ಟ್ ನೀಡಲಾಗಿದೆ ಎಂದಿದೆ.
ಕರಾವಳಿ ಜಿಲ್ಲೆಗಳಾದಂತ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜುಲೈ.29ರಂದು ಆರೆಂಜ್ ಅಲರ್ಟ್ ನೀಡಿದ್ದರೇ, ಜುಲೈ.30 ಮತ್ತು 31ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ.31ರವರೆಗೆ ಮಲೆನಾಡಿನಲ್ಲೂ ವ್ಯಾಪಕ ಮಳೆಯಾಗಲಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು , ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೂ ಜುಲೈ 30 ರವರೆಗೆ ಭಾರೀ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದೆ.