ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವೆಡೆ ಅಕ್ಟೋಬರ್ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.