October 10, 2026
Saturday, October 10, 2026
spot_img

ರಾಜ್ಯದಲ್ಲಿ ಮುಂದಿನ ಮೂರು ಗಂಟೆ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬೇಸಿಗೆಯಂತಹ ಬಿಸಿಲಿನಿಂದಾಗಿ ಜನ ಹೈರಾಣಾಗಿದ್ದರು. ಈ ವಾತಾವರಣದಿಂದ ಜನರಿಗೆ ಬ್ರೇಕ್‌ ಸಿಕ್ಕಿದ್ದು, ಬೆಂಗಳೂರಿನಲ್ಲಿ ಕಳೆದ ಎರಡು ಗಂಟೆಯಿಂದ ಮಳೆ ಬೀಳುತ್ತಿದೆ. ಮಳೆ ಇನ್ನೂ ಮೂರು ಗಂಟೆ ಮುಂದುವರಿಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆ ಬೀಳಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಂದು ಗಂಟೆಯಿಂದ ಭಾರೀ ಮಳೆ ಸುರಿಯುತ್ತಿದ್ದು,ಎಲ್ಲೆಡೆ ಟ್ರಾಫಿಕ್‌ ಜಾಮ್‌ ಆಗಿದೆ.

ಆಫೀಸಿನಿಂದ ಮನೆಗೆ ಬರುತ್ತಿದ್ದ ಜನರಿಗೆ ಮಳೆರಾಯ ಅಡ್ಡ ಹಾಕಿದ್ದು, ಮನೆಗೆ ಹೋಗೋಕಾಗದೇ ಜನ ಹೈರಾಣಾಗಿದ್ದಾರೆ. ಮಳೆಯಿಂದಾಗಿ ಇಂದು ಹಾಗೂ ನಾಳೆ ಬೆಂಗಳೂರಿನ ಹಲವು ಭಾಗಗಳಲ್ಲಿ ತಾತ್ಕಾಲಿಕ ವಿದ್ಯುತ್‌ ವ್ಯತ್ಯಯವಾಗುವ ಸಾಧ್ಯತೆ ಇದೆ. ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ. ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.

Must Read