ದಕ್ಷಿಣ ಕನ್ನಡ, ಉತ್ತರ ಕನ್ನಡ , ಉಡುಪಿಯಲ್ಲಿ ನಾಲ್ಕು ದಿನ ಭಾರೀ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಕರಾವಳಿಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜು. ೨೯ರವರೆಗೂ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಳಗಾವಿ, ಬೀದರ್. ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮಳೆ ಹೆಚ್ಚಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾರಣವರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!