ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತಿದಿಂದಾಗಿ ಬೆಂಗಳೂರು, ಚೆನ್ನೈ ಹಾಗೂ ಪುದುಚೆರಿಯಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಇನ್ನೆರಡು ದಿನ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.
ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆ, ಚಳಿ ವಾತಾವರಣ ಇದೆ. ಮುಂದಿನ ಎರಡು ದಿನ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ಬೆಂ. ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಹಾವೇರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.