ಭಾರೀ ಮಳೆಯ ಮುನ್ಸೂಚನೆ: ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ನೀಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.

ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!