Wednesday, August 10, 2022

Latest Posts

ರಾಜ್ಯದ ಹಲವಡೆ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಹಲವು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಉತ್ತರ ಆಂಧ್ರಪ್ರದೇಶ, ದಕ್ಷಿಣ ಒಡಿಶಾ ಹಾಗೂ ಸೌರಾಷ್ಟ್ರ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಪ್ರಭಾವದಿಂದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 14ರಿಂದ 17ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ ಎಂದಿದ್ದಾರೆ.
ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 14ರಿಂದ 17ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದರು.
ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯನ್ನು ನಿರೀಕ್ಷಿಸಿದ್ದು, ಜುಲೈ 14ರಿಂದ 17ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಕ್ರಿಯ, ಉತ್ತರ ಒಳನಾಡಿನಲ್ಲಿ ಸಹಜ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಉತ್ತರ ಒಳನಾಡಿನಲ್ಲಿ ವ್ಯಾಪಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಂಗಳವಾರ ಮಳೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss