September 5, 2026
Saturday, September 5, 2026
spot_img

WEATHER | ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸೂಚನೆ, ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂಗಾರು ಮಳೆ ಆವರಿಸಿದ್ದು, ಹಲವು ಭಾಗಗಳಲ್ಲಿ ಜೋರು ಮಳೆ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಎರಡರಿಂದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಈಗಾಗಲೇ ಮೋಡಕವಿದ ವಾತಾವರಣವಿದ್ದು, ಕೆಲವು ಕಡೆ ಮಾತ್ರ ಸಂಜೆ ಮಳೆ ಬೀಳುತ್ತಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಇರಲಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ವರುಣಾರ್ಭಟ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !