Sunday, September 25, 2022

Latest Posts

ಮುಂಬೈನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್‌ ಅಲರ್ಟ್‌ ಘೋಷಿಸಿದ ಐಎಂಡಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶಾದ್ಯಂತ ಭಾರೀ ಮಳೆಯಾಗುತ್ತಿದ್ದು, ವಾಣಿಜ್ಯ ನಗರಿ ಮುಂಬೈನಲ್ಲಿ ವರುಣನ ಆರ್ಭಟ ಜೋರಾಗುವ ಸಾಧ್ಯತೆ ಹಿನ್ನಲೆ ಭಾರತೀಯ ಹವಮಾನ ಇಲಾಖೆ ಅಲ್ಲಿ  ರೆಡ್‌ ಅಲರ್ಟ್‌ ಘೋಷಿಸಿದೆ.

ಇದಕ್ಕೂ ಮುನ್ನ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಅನ್ನು ಘೋಷಿಸಿತ್ತು. ಆದರೆ, ಪರಿಸ್ಥಿತಿಯಲ್ಲಿ ಬದಲಾವಣೆಯಾದ್ದರಿಂದ ಮಳೆ ಮುನ್ನೆಚ್ಚರಿಕೆ ವರದಿಯಲ್ಲೂ ಬದಲಾವಣೆಯಾಯಿತು ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ ನಿರ್ದೇಶಕಿ ಡಾ. ಜಯಂತ್‌ ಸರ್ಕಾರ್‌ ತಿಳಿಸಿದ್ದಾರೆ.

ಮುಂಬೈನಲ್ಲಿ ಮುಂದಿನ ಕೆಲವು ದಿನಗಳವರೆಗೂ ಭಾರೀ ಮಳೆಯಾಗಲಿದೆ. ದಕ್ಷಿಣ ಗುಜರಾತ್ ಕರಾವಳಿಯಿಂದ ಕರ್ನಾಟಕದವರೆಗಿನ ತೀರದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಳೆ ಗಾಳಿಯ ಮುನ್ಸೂಚನೆ ಕೂಡ ಮುಂಬೈನ ಮತ್ತಿತರ ಪ್ರದೇಶದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ ಎಂದು ಸರ್ಕಾರ್ ತಿಳಿಸಿದ್ದಾರೆ.

ಕರಾವಳಿ ಕರ್ನಾಟಕ, ದಕ್ಷಿಣ ಗುಜರಾತ್‌ ಪ್ರದೇಶಗಳಲ್ಲಿಯೂ ಕೂಡ ಟ್ರಫ್ (ಕಡಿಮೆ ಒತ್ತಡ ತಗ್ಗು) ಉಂಟಾಗಿದ್ದರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶ, ರಾಯ್‌ಗಡ, ಪುಣೆ, ನಾಸಿಕ್‌, ಕೊಲ್ಹಾಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದೆ.

ಮುಂಬೈಲ್ಲಿ ಶನಿವಾರ ಮತ್ತು ಭಾನುವಾರ ಧಾರಾಕಾರ ಮಳೆ ಸುರಿದು, ಜನಜೀವನ ಅಸ್ತವ್ಯಸ್ತವಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!