ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿರುಸಿನ ಮಳೆ ಹಾಗೂ ಪ್ರಬಲ ಗಾಳಿ ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆ.6 ರಂದು ಬುಧವಾರ ಕಾಸರಗೋಡು ಜಿಲ್ಲೆಯಲ್ಲಿ ತಿರುವನಂತಪುರದ ಕೇಂದ್ರ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಕೆ.ಇನ್ಬಶೇಖರ್ ಅವರು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಆ.6ರಂದು (ಇಂದು) ರಜೆ ಘೋಷಿಸಿದ್ದಾರೆ.
ಜಿಲ್ಲೆಯ ಶಾಲೆಗಳು, ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಕೇಂದ್ರೀಯ ವಿದ್ಯಾಲಯಗಳು, ಟ್ಯೂಷನ್ ಸೆಂಟರ್ ಗಳು, ಮದರಸಾಗಳು, ಅಂಗನವಾಡಿಗಳು ಮತ್ತು ವಿಶೇಷ ತರಗತಿಗಳಿಗೆ ರಜೆ ಅನ್ವಯವಾಗುತ್ತದೆ.
ಈ ಹಿಂದೆ ಘೋಷಿಸಲಾದ ಎಲ್ಲಾ ಪರೀಕ್ಷೆಗಳು (ವೃತ್ತಿಪರ, ವಿಶ್ವವಿದ್ಯಾಲಯ ಮತ್ತು ಇತರ ಇಲಾಖೆ ಪರೀಕ್ಷೆಗಳು ಸಹಿತ) ನಿಗದಿಯಂತೆ ನಡೆಯಲಿವೆ. ಪರೀಕ್ಷಾ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ತಿಳಿಸಲಾಗಿದೆ. ಇನ್ನೊಂದೆಡೆ ಯಾವುದೇ ಭಾಗದಲ್ಲಿ ದುರಂತಗಳು ಸಂಭವಿಸುವ ಸಾಧ್ಯತೆಯಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ 9446601700 ಮೊಬೈಲ್ ನಂಬರ್ ಗೆ ಕರೆ ಮಾಡಬಹುದೆಂದು ಜಿಲ್ಲಾಡಳಿತವು ಮಾಹಿತಿ ನೀಡಿದೆ.