ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಮೂರು ಜಿಲ್ಲೆಗಲ್ಲಿ ಭಾರೀ ಮಳೆಯ ನಿರೀಕ್ಷೆಯಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ತಿರುವನಂತಪುರಂ, ಇಡುಕ್ಕಿ ಮತ್ತು ಪತ್ತನಂತಿಟ್ಟದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಯಲ್ಲಿ ಹೇಳಿದೆ.
ಇತ್ತ ಶಬರಿಮಲೆ ದೇವಸ್ಥಾನ ಇರುವ ಪತ್ತನಂತಿಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಹವಮಾನಾ ಇಲಾಖೆಯ ವರದಿಗಳ ಪ್ರಕಾರ, ಜಿಲ್ಲೆಯಲ್ಲಿ ಗುರುವಾರವೂ ಭಾರೀ ಮಳೆ ಮುಂದುವರಿಯಲಿದೆ.
ಶಬರಿಮಲೆ ಸುತ್ತ ಧಾರಾಕಾರ ಮಳೆಯಾಗುತ್ತಿದ್ದು, ಯಾತ್ರಾರ್ಥಿಗಳು ಪರದಾಡುವಂತಾಯಿತು. ದೇಗುಲಕ್ಕೆ ಪಾದಯಾತ್ರೆ ಮಾಡುವವರು, ಭೂಮಿ ಜಾರುತ್ತಿರುವ ಕಾರಣ ಮತ್ತಷ್ಟು ತೊಂದರೆ ಅನುಭವಿಸಿದರು.
ಪತ್ತನಂತಿಟ್ಟ ಮತ್ತು ತಿರುವನಂತಪುರಂನಲ್ಲಿ ಬುಧವಾರ ಹಲವು ಸ್ಥಳಗಳಲ್ಲಿ ಜಲಾವೃತವಾಗಿದೆ. ತಮಿಳುನಾಡಿನಲ್ಲಿ ಚಂಡಮಾರುತದ ಪ್ರಭಾವದಿಂದ ಕೇರಳದಲ್ಲಿ ಈಶಾನ್ಯ ಮಾನ್ಸೂನ್ ಮತ್ತೆ ಸಕ್ರಿಯವಾಯಿತು.