ಭರ್ಜರಿ ವರ್ಷಧಾರೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದೆ.ಬಾಗಲಕೋಟೆ​, ಬೆಂ.ಗ್ರಾಮಾಂತರ, ಬೀದರ್​​, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಡಗು, ಶಿವಮೊಗ್ಗ ಹಾಗೂ ರಾಮನಗರದಲ್ಲಿ ಭರ್ಜರಿ ವರ್ಷಧಾರೆಯಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗಿನಲ್ಲಿ ಜೂ 23ರಿಂದ ಜೂ 25ರವರೆಗೆ ಅತಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್​ ​ ಅಲರ್ಟ್ ಘೋಷಿಸಿದೆ.

ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮುಂದಿನ ಮೂರು ದಿನ ಆರೆಂಜ್​ ಅರ್ಲಟ್​ ಇದ್ದರೆ, ಮೈಸೂರು, ಬೀದರ್​ನಲ್ಲಿ ಜೂ 23, ಜೂ 24ರಂದು ಯೆಲ್ಲೋ ಅರ್ಲಟ್​ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವರ್ಷಧಾರೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಹಾಗೂ ಪೂರ್ವ ಅರಬ್ಬಿ ಸಮುದ್ರದಲ್ಲಿ ಮೋಡ ಕವಿದ ವಾತಾವರಣ ಇರುವ ಕಾರಣದಿಂದಾಗಿ ರಾಜ್ಯದಲ್ಲೆಡೆ ಉತ್ತಮ ಮಳೆ ಬೀಳುತ್ತಿದೆ. ಅರಬ್ಬಿ ಸಮುದ್ರದಲ್ಲಿ ಪ್ರತಿ ಗಂಟೆಗೆ 45-55 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಜೂ 23ರಿಂದ ಜೂ 26ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಮುಂದಿನ ದಿನಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದಿನ 4 ದಿನ ಭಾಗಶ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ. ಕೆಲವೊಮ್ಮೆ ಮೇಲ್ಮೆ ಗಾಳಿ ಪ್ರಬಲವಾಗಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವೂ ಕ್ರಮವಾಗಿ 31 ಡಿ.ಸೆ. ಹಾಗೂ 21 ಡಿ.ಸೆ. ಇರಲಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!