ಹೊಸದಿಗಂತ ಡಿಜಿಟಲ್ ಡೆಸ್ಕ್:
ದ.ಕ. ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದೀಗ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮಂಗಳವಾರ (ಜು.25 ) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಭಾರಿ ಮಳೆ ಹಿನ್ನೆಲೆಯಲ್ಲಿ ಜು.25ರಂದು (ಮಂಗಳವಾರ) ನಡೆಯಬೇಕಿದ್ದ ಮಂಗಳೂರು ವಿ.ವಿ. ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕ ಮರುನಿಗದಿಗೊಳಿಸಿ ಸಂಯೋಜಿತ ಕಾಲೇಜುಗಳಿಗೆ ತಿಳಿಸಲಾಗುವುದು ಎಂದು ವಿ.ವಿ. ಪ್ರಕಟಣೆ ತಿಳಿಸಿದೆ.