ಹೊಸದಿಗಂತ ವರದಿ,ಮಡಿಕೇರಿ:
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ಜು.31ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.