ಹೊಸದಿಗಂತ ವರದಿ,ಮಂಗಳೂರು,ಮಡಿಕೇರಿ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಈ ಹಿನ್ನೆಲೆ ಮಂಗಳವಾರ (ಜು.16 ರಂದು) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ವರೆಗಿನ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ರಜೆ
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ (ವಿವಿ ಕಾಲೇಜುಗಳು ಹೊರತುಪಡಿಸಿ) ಮಂಗಳವಾರ (16ರಂದು) ರಜೆ ಘೋಷಿಸಲಾಗಿದೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ರಜೆ
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ (ಜು.16 ರಂದು) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ತನಕದ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ.