ಹೊಸದಿಗಂತ ವರದಿ,ಕಾಸರಗೋಡು:
ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕಳೆದ ಕೆಲವು ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಅಲ್ಲದೆ ಮಳೆಯ ಆರ್ಭಟ ಮುಂದುವರಿದಿರುವುದರಿಂದ ಜಿಲ್ಲೆಯ ಹಲವೆಡೆ ಮತ್ತು ಕಾಲೇಜುಗಳ ಪರಿಸರ (ವೃತ್ತಿಪರ ಕಾಲೇಜುಗಳು ಸೇರಿದಂತೆ) ಜಲಾವೃತವಾಗಿವೆ.
ಆದ್ದರಿಂದ ರಾಜ್ಯ, ಸಿಬಿಎಸ್ ಇ, ಐಸಿಎಸ್ ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳು ಇತ್ಯಾದಿಗಳಿಗೆ ನಾಳೆ (ಜುಲೈ 31ರಂದು ಬುಧವಾರ) ಜಿಲ್ಲಾಧಿಕಾರಿ ಕೆ.ಇನ್ಬಶೇಖರ್ ರಜೆ ಘೋಷಿಸಿದ್ದಾರೆ. ಇದೇ ವೇಳೆ ಪೂರ್ವ ನಿರ್ಧರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.