ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾಧ್ಯಂತ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ವರುಣ ಆರ್ಭಟಿಸುತ್ತಿದ್ದು, ಈ ಹಿನ್ನೆಲೆ ಕೆಲ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಾಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ಐದು ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ನಾಳೆ ಮುಂದುವರೆಯಲಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.