ರಣಭೀಕರ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ತತ್ತರಿಸಿರುವ ದ‌ಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆ(16) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ ಮತ್ತು ಮೂಡಬಿದ್ರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಪ್ರಕಟಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಕೂಡ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ 10ನೇ ತರಗತಿಯವರೆಗೆ ರಜೆ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!