ಹೊಸದಿಗಂತ ವರದಿ,ಮಂಗಳೂರು:
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 1ರಂದು ಗುರುವಾರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.