ಭಾರೀ ಮಳೆ: ದಕ್ಷಿಣಕೊಡಗಿನ ಶಾಲೆಗಳಿಗೆ ರಜೆ ಘೋಷಣೆ

ಹೊಸ ದಿಗಂತ ವರದಿ, ಮಡಿಕೇರಿ:

ದಕ್ಷಿಣ ಕೊಡಗಿನಲ್ಲಿ ಮಳೆಯ ರೌದ್ರಾವತಾರ ಮುಂದುವರಿದಿದ್ದು, ಲಕ್ಷ್ಮಣತೀರ್ಥ ಸೇರಿದಂತೆ ಆ ಭಾಗದ ನದಿ-ತೊರೆಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶುಕ್ರವಾರ ಹಾಗೂ ಶನಿವಾರ ರಜೆ ಘೋಷಿಸಿ ಕ್ಷೇತ್ರ ಶೀಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ ಗಾಳಿಯಿಂದ ಕೂಡಿದ ಭಾರೀ ಮಳೆಯಾಗುತ್ತಿರುವುದನ್ನು ಪರಿಗಣಿಸಿ ಮತ್ತು ಮುಂದಿನ 2-3 ದಿನಗಳಲ್ಲಿ ಮತ್ತಷ್ಟು‌ ಮಳೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ, ಆಡಳಿತ ಮಂಡಳಿಯ ಕೋರಿಕೆ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಗಳ ಕೋರಿಕೆ, ಸಾರ್ವಜನಿಕರ, ಪೋಷಕರ ಮನವಿ ಆಧರಿಸಿ ಶಾಸಕರು, ಜಿಲ್ಲಾಧಿಕಾರಿಗಳು ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕರೊಂದಿಗೆ ಚರ್ಚಿಸಿ ಈ ಎರಡೂ ತಾಲೂಕುಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೊರತೆಯಾದ ಶಾಲಾ ದಿನಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!