ಭಾರೀ ಮಳೆ: ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಬುಧವಾರವೂ ರಜೆ

ಹೊಸದಿಗಂತ ವರದಿ, ಮಂಗಳೂರು:

ಭಾರಿ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮತ್ತು ಸುಳ್ಯ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆ. 3ರಂದು ಬುಧವಾರವೂ ರಜೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ ದಿಂದ ಸುಬ್ರಹ್ಮಣ್ಯ ಸುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಬಿದ್ದಿದ್ದು, ಮಂಗಳವಾರ ರಾತ್ರಿಯೂ ಅವ್ಯಾಹತವಾಗಿ ಮಳೆಯಾಗಿದೆ. ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!