Wednesday, September 3, 2025

WEATHER |ರಾಜ್ಯದಲ್ಲಿ ಇನ್ನೂ ಒಂದು ದಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂದಿನ 1 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇದನ್ನೂ ಓದಿ