Wednesday, December 7, 2022

Latest Posts

ಬೆಂಗಳೂರಿನಲ್ಲಿ ಜೋರು ಮಳೆ, ಭಾರೀ ಟ್ರಾಫಿಕ್ ಜಾಮ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವರುಣನ ಆರ್ಭಟದಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.

ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಹಲವೆಡೆ ಭಾರೀ ಮಳೆಯಾದ ಕಾರಣ ಟ್ರಾಫಿಕ್ ಜಾಮ್ ಉಂಟಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುವವರು ಟ್ರಾಫಿಕ್ ಜಾಮ್‌ನಿಂದಾಗಿ ಪರದಾಡಿದ್ದಾರೆ. ಮೆಜೆಸ್ಟಿಕ್, ಹೆಬ್ಬಾಳ, ಎಲೆಕ್ಟ್ರಾನಿಕ್ ಸಿಟಿ, ವಿಜಯನಗರ, ಶಾಂತಿನಗರ, ಕೆ.ಆರ್. ಮಾರ್ಕೆಟ್, ಲಾಲ್ ಭಾಗ್, ಜಯನಗರ, ಜೆ.ಪಿ. ನಗರಹಾಗೂ ರಾಜರಾಜೇಶ್ವರಿ ನಗರದಲ್ಲಿಯೂ ಜೋರು ಮಳೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!