ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದು, ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ, ಲೋಂಡಾ, ಜಾಂಬೋಟಿ ಭಾಗದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ ಎಂದಿದ್ದಾರೆ.
ಭಾರೀ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಡಂಚಿನ ಮಕ್ಕಳು ಶಾಲೆಗೆ ತೆರಳಲು ಪರದಾಡುವಂತ ಸ್ಥಿತಿ ಉಂಟಾಗಿದೆ. ಹೀಗಾಗಿ ಖಾನಾಪುರ ತಾಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ.