ಬೆಂಗಳೂರು ನಗರದಲ್ಲಿ ಭಾರೀ ಮಳೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು ನಗರದಲ್ಲಿ ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಕೆಲವೆಡೆ ರಸ್ತೆ ಸಂಚಾರ ಕೂಡ ಅಸ್ತವ್ಯಸ್ಥಗೊಂಡಿವೆ.ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನ ಪೂರ್ವ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಸಂಬಂಧ ಬೆಂಗಳೂರು ದಕ್ಷಿಣ ವಲಯ 4ರ ಬಿಇಒ ಆದೇಶ ಹೊರಡಿಸಿದ್ದು, ಭಾರೀ ಮಳೆಯಿಂದಾಗಿ ನೆರೆ ಪರಿಸ್ಥಿತಿ ಬೆಂಗಳೂರು ಪೂರ್ವ ತಾಲೂಕಿನಲ್ಲಿ ಉಂಟಾಗಿದೆ. ಮನೆಯಿಂದ ಹೊರ ಬರಲಾರದಂತ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಪೂರ್ವ ತಾಲೂಕಿನ ಸರ್ಕಾರಿ, ಖಾಸಗಿ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವಂತ ಮಳೆಯಿಂದಾಗಿ ಜಲಪ್ರಳಯವೇ ಉಂಟಾಗಿದೆ. ಎಲ್ಲೆಲ್ಲೂ ನೀರು ಕಂಡುಬಂದಿದ್ದು, ರಸ್ತೆಗಳು ನದಿಗಳಾಗಿ ಮಾರ್ಪಟ್ಟಿವೆ. ವಾಹನಗಳು ನೀರಿನಲ್ಲಿ ಮುಳುಗಿ ಹೋಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!