Saturday, December 9, 2023

Latest Posts

ಬೆಂಗಳೂರಿನಲ್ಲಿ ಭಾರೀ ಮಳೆ, ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್​​ಗಳಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು.  ಮಳೆ ಅನಾಹುತಗಳ ಬಗ್ಗೆ ನಿಗಾ ವಹಿಸಬೇಕು.  ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಅವರು ಪಾಲಿಕೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.

ನಗರದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಮಂಗಳವಾರವೂ ನಗರದಾದ್ಯಂತ ಮಧ್ಯಾಹ್ನದಿಂದಲೇ ಭಾರೀ ಮಳೆ ಸುರಿದಿದೆ. ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ, ಶಾಂತಿನಗರ, ಜಯನಗರ, ಕೆಆರ್​ ಮಾರುಕಟ್ಟೆ, ವಿಜಯನಗರ, ಮೆಜೆಸ್ಟಿಕ್, ಬನಶಂಕರಿ, ಜೆಪಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!