WEATHER | ಬೆಂಗಳೂರಲ್ಲಿ ಇಂದು ಮಳೆ ಜೋರು, ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿನ್ನೆ ಸಂಜೆ ರಾಜ್ಯಾದ್ಯಂತ ಭಾರೀ ಮಳೆ ಸುರಿದಿದ್ದು, ಇಂದು ಕೂಡ ಜೋರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!