June 23, 2026
Tuesday, June 23, 2026
spot_img

ಬೆಂಗಳೂರಿನಲ್ಲಿ ಭಾರಿ ಮಳೆ, ಇನ್ನೂ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಬೀಳುತ್ತಲೇ ಇದೆ. ಇನ್ನೂ ನಾಲ್ಕು ದಿನ ಈ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಮತ್ತು ರಾಜ್ಯದ ದಕ್ಷಿಣ ಒಳನಾಡಿನ ಇತರೆ ಭಾಗಗಳಲ್ಲಿಯೂ ಜೂನ್ 5 ರವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ವಿದರ್ಭ, ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮೂರು ನಾಲ್ಕು ದಿನ ಭಾರೀ ಮಳೆ ಬೀಳಲಿದೆ. ಇಂದುನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಮೂರು ಅಥವಾ ನಾಲ್ಕು ದಿನಗಳಲ್ಲಿ ಅರೇಬಿಯನ್ ಸಮುದ್ರ, ಕೇರಳ, ತಮಿಳುನಾಡು ಮತ್ತು ಬಂಗಾಳಕೊಲ್ಲಿಯ ಕೆಲವು ಭಾಗಗಳಲ್ಲಿ ನೈಋತ್ಯ ಮುಂಗಾರು ಮತ್ತಷ್ಟು ಮುನ್ನಡೆಯಲು ಅನುಕೂಲಕರ ಪರಿಸ್ಥಿತಿಗಳನ್ನು ಸೃಷ್ಟಿಸುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !