ಧಾರಾಕಾರ ಮಳೆ: ಹಳ್ಳದಾಟುತ್ತಿದ್ದ ಒಂದೇ ಕುಟುಂಬದ ಮೂವರು ನೀರುಪಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೀದರ್ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದ್ದು, ಈ ಹಿನ್ನೆಲೆ ಹಳ್ಳ ದಾಟಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲಾಗಿರುವ ದುರ್ಘಟನೆ ನಡೆದಿದೆ.

ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 ವರ್ಷದ ಸುನಂದಾ ಸಂಗಪ್ಪಾ ಲದ್ದೆ, 12 ವರ್ಷದ ಮಗ ಸುಮಿತ್ ಹಾಗೂ 14 ವರ್ಷದ ಮಗಳು ಐಶ್ವರ್ಯಾ ಲದ್ದೆ ಮೃತ ದುರ್ದೈವಿಗಳಾಗಿದ್ದಾರೆ. ಹೊಲದಲ್ಲಿ ಕೆಲಸ ಮಾಡಿ ಮನೆಗೆ ವಾಪಾಸಾಗುವ ವೇಳೆ ಈ ದುರ್ಘಟನೆ ನಡೆದಿದೆ.

ಬೀದರ್‌ ಜಿಲ್ಲೆಯಲ್ಲಿ ಭಾರಿ ಬಿರುಗಾಳಿ ಜೊತೆಗೆ ಸುರಿದ ಅಕಾಲಿಕ ಮಳೆಯಿಂದ ಹೆಡಗಾಪುರ ಗ್ರಾಮದ ಹಳ್ಳ ಉಕ್ಕಿ ಹರಿದಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳವನ್ನೇ ಸಂಗಪ್ಪ ರೈತ ಕುಟುಂಬ ದಾಟಲು ಮುಂದಾಗಿದ್ದಾರೆ.

ಮೃತ ಸುನಂದಾ ಪತಿ ಹಳ್ಳ ದಾಟಿದ್ದು, ಆದರೆ ಪತ್ನಿ ಹಾಗೂ ಮಕ್ಕಳು ಸೇರಿ ಮೂವರು ನೀರಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳುಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!