ಹೊಸ ದಿಗಂತ ವರದಿ, ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮತ್ತೆ ಬಿರುಸು ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಲೆನಾಡು ತಾಲ್ಲೂಕುಗಳ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಅಂಗನವಾಡಿಗಳಿಗೆ ಜುಲೈ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜು ಆದೇಶಿಸಿದ್ದಾರೆ.
ಮೂಡಿಗೆರೆ, ಕಳಸ, ಶೃಂಗೇರಿ, ಎನ್ ಆರ್ ಪುರ, ಕೊಪ್ಪ ತಾಲೂಕಿನಾದ್ಯಂತ ಹಾಗೂ ಚಿಕ್ಕಮಗಳೂರು ತಾಲೂಕಿನ ಆಲ್ದೂರು, ಖಾಂಡ್ಯ, ಜಾಗರ ಮತ್ತು ವಸ್ತಾರೆ ಹೋಬಳಿಗಳಿಗೆ ರಜೆ ಅನ್ವಯವಾಗಲಿದೆ ಎಂದು ಡಿಸಿ ತಿಳಿಸಿದ್ದಾರೆ.