ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಸಿಡಿಲು ಬಡಿದು ಓರ್ವ ಮಹಿಳೆ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಇಂದು ಭಾರೀ ಮಳೆಯಾಗಿದ್ದು, ಜೊತೆಗೆ ಸಿಡಿಲು ಬಡಿದು ಓರ್ವ ಮಹಿಳೆ ಕೂಡ ಇಂದು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆ ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಎಂದು ತಿಳಿದು ಬಂದಿದೆ.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಮೃತ ಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!