ಕರಾವಳಿಯ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ತುಂತುರ ಮಳೆಯಾಗಲಿದ್ದು, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಸೇರಿ ಹಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!