March 15, 2026
Sunday, March 15, 2026
spot_img

ಪಟಾಕಿ ಠುಸ್‌ ಅನ್ನಬಹುದು! ರಾಜ್ಯದಲ್ಲಿ ಮತ್ತೆ ಮಳೆ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳು ಸೇರಿದಂತೆ ದೇಶದಾದ್ಯಂತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಯಾವ ಸಮಯದಲ್ಲಾದರೂ ಮಳೆಯಾಗುವ ಸಾಧ್ಯತೆ ಇದೆ.

ಅದರಲ್ಲೂ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದು, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಹೆಚ್ಚಿನ ಪ್ರಮಾಣದ ಗಾಳಿಯೂ ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಅಲರ್ಟ್​ ಇರಲಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಗಾಳಿ ಮಳೆ ಸಾಧ್ಯತೆ
ರಾಜಧಾನಿ ಬೆಂಗಳೂರಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !