ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಬಹುತೇಕ ಕಡೆ ಮುಂಗಾರು ಅಬ್ಬರ ಹೆಚ್ಚಿದೆ. ಇಂದಿನಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ.
ಭಾಗಮಂಡಲ, ಗೇರುಸೊಪ್ಪ, ಆಗುಂಬೆ, ಸಿದ್ದಾಪುರದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಳ್ಯ, ಕಾರ್ಕಳ, ಕೋಟಾ, ಧರ್ಮಸ್ಥಳ, ಬೆಳ್ತಂಗಡಿ, ಸಿದ್ದಾಪುರ, ಉಪ್ಪಿನಂಗಡಿ, ಕುಂದಾಪುರ, ಹೊನ್ನಾವರ, ಕ್ಯಾಸಲ್ರಾಕ್, ಉಡುಪಿ, ಮಾಣಿ, ಮಂಕಿ, ಕಮ್ಮರಡಿ, ನಾಪೋಕ್ಲು, ಜಯಪುರ, ಶೃಂಗೇರಿ, ಪೊನ್ನಂಪೇಟೆ, ಕೊಟ್ಟಿಗೆಹಾರ, ವಿರಾಜಪೇಟೆ, ಪುತ್ತೂರು, ಮಂಗಳೂರು, ಕುಮಟಾ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ.