ಹೊಸದಿಗಂತ ವರದಿ ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ ಭಾರೀ ಮಳೆಯಾಗುತ್ತಿದ್ದು, ಮಂಗಳವಾರ ಕೂಡ ಮುಂದುವರಿದಿದೆ.
ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಇಂದು(ಜು.5) ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯ ಕಾರಣ ಜಿಲ್ಲೆಯ ಜೀವ ನದಿಗಳು ಉಕ್ಕಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರ ನದಿಗಳು ಮೈದುಂಬಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ