November 7, 2026
Saturday, November 7, 2026
spot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ಇಡೀ ದಿನ ಎಡೆಬಿಡದೆ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಶುಕ್ರವಾರವೂ ಭಾರಿ ಮಳೆ‌ ಮುಂದುವರೆಯುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Must Read