ದ.ಕದಲ್ಲಿ ಭಾರೀ ಮಳೆ: ಇಂದು ಶಾಲೆಗಳಿಗೆ ರಜೆ

ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಮಳೆಯ ಆರ್ಭಟ ಬಿರುಸುಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಕಾರಣ ಇಂದು(ಮೇ19) ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!