Thursday, July 7, 2022

Latest Posts

ರಾಷ್ಟ್ರರಾಜಧಾನಿಯಲ್ಲಿ ವರುಣನ ಅಬ್ಬರ: ಪ್ರಮುಖ ನಗರಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇಂದು ಕೂಡ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುಗ್ರಾಮ್, ಮನೇಸರ್, ಫರಿದಾಬಾದ್, ಲೋನಿ ಡೆಹತ್, ಹಿಂಡನ್ ಎಎಫ್ ಸ್ಟೇಷನ್, ಗಾಜಿಯಾಬಾದ್, ಇಂದಿರಾಪುರಂ, ನೋಯ್ಡಾ, ದಾದ್ರಿ, ಗ್ರೇಟರ್ ನೋಯ್ಡಾ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಸದ್ಯ ದೆಹಲಿಯಲ್ಲಿ ವಾಯು ಗುಣಮಟ್ಟ ಸ್ವಲ್ಪ ಸುಧಾರಿಸಿದ್ದು, ಇಂದು ಬೆಳಗ್ಗೆ 7 ಗಂಟೆಗೆ ವಾಯುಗುಣಮಟ್ಟ ಎಕ್ಯೂಐ ಸೂಚಿಯು 82ರಷ್ಟು ವರದಿಯಾಗಿದೆ.
ರಾಜ್ಯದಲ್ಲಿ ಬಿಸಿಲಿನ ಶಾಖ ಕಡಿಮೆಯಾದರೂ ಮಳೆಯ ಆರ್ಭಟಕ್ಕೆ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಗೆ ಮನೆಗಳು ನಾಶವಾಗಿದ್ದು, ದೆಹಲಿಯ ಮಿಂಟೋ ಸೇತುವೆ ಬಳಿ ಶವ ತೇಲುತ್ತಿದ್ದು, ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಪೊಲೀಸರು ಖಚಿತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss