Tuesday, May 30, 2023

Latest Posts

ದೆಹಲಿಯಲ್ಲಿ ಭಾರೀ ಮಳೆ : ರೈಲು, ವಿಮಾನ ಸಂಚಾರ ವ್ಯತ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಹಲವೆಡೆ ಬೇಸಿಗೆ ಮಳೆ ಸುರಿದಿದ್ದು, ಹಲವಾರು ಸಮಸ್ಯೆಗಳು ಎದುರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಭಾರೀ ಮಳೆಯಿಂದಾಗಿ ರೈಲು ಹಾಗೂ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ರಾತ್ರಿಯಿಡೀ ಸುರಿದ ಮಳೆಗೆ ದೆಹಲಿ ನಡುಗಿದ್ದು, 15 ಕ್ಕೂ ಹೆಚ್ಚು ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. ದೆಹಲಿಗೆ ಬರುವ ರೈಲುಗಳು ತಡವಾಗಿ ಬರುವ ಬಗ್ಗೆ ರೈಲ್ವೆ ಇಲಾಖೆ ಪ್ರಕಟಣೆ ನೀಡಿದೆ.

ದೆಹಲಿಯ ಹಲವು ಪ್ರದೇಶದಲ್ಲಿ ಹೆಚ್ಚು ಮಳೆಯಾಗಿದ್ದು, ರಾತ್ರಿ ಸುರಿದ ಮಳೆಗೆ ಬೆಳಗ್ಗೆ ತಗ್ಗು ಪ್ರದೇಶದ ಮನೆಗಳು ಕೆರೆಯಂತಾಗಿವೆ, ನೀರು ನುಗ್ಗಿದ್ದು, ನೀರು ಹೊರಹಾಕಲು ಸಾಧ್ಯವಾಗದೇ ಜನ ಹೈರಾಣಾಗಿದ್ದಾರೆ. ಮಳೆಯಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!