ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನರು ತತ್ತರಿಸಿಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಹಾಸನ ಜಿಲ್ಲೆಯ ಕೆಲವು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು ಕೆಲವು ಕಡೆಗಳಲ್ಲಿ ಮಕ್ಕಳು ಹಳ್ಳ ತೊರೆಗಳನ್ನು ದಾಟಿ ಶಾಲೆಗೆ ಬರಬೇಕಾದ ಪರಿಸ್ಥಿತಿ ಇರುತ್ತದೆ. ಈ ಸಂಬಂಧ ಜಿಲ್ಲಾಧಿಕಾರಿಗಳು 16/07/2024ರಂದು ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ . ಸದರಿ ದಿನದ ತರಗತಿಗಳನ್ನು 20/07/2024 ರ ಶನಿವಾರದಂದು ಸರಿದೂಗಿಸಿಕೊಳ್ಳುವಂತೆ ಸೂಚಿಸಿದೆ.