ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ ಜಿಲ್ಲೆಯಾದ್ಯಂತ ಕಳೆದ ಅರ್ಧ ಗಂಟೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ನಗರದಾದ್ಯಂತ ಶಾಲಾ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಪರದಾಟ ನಡೆಸಿದ ಸನ್ನಿವೇಶ ಕಂಡುಬಂದಿದೆ.
ಕಲಬುರಗಿ ನಗರ ಹಾಗೂ ಗ್ರಾಮೀಣ ಪ್ರದೇಶದಾದ್ಯಂತ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಆವರಿಸಿದ್ದು, ಬೆಳಿಗ್ಗೆ 10 ಸುಮಾರಿಗೆ ಸುರಿಯಲು ಆರಂಭವಾದ ಮಳೆ,ಬಿಟ್ಟು ಬಿಡದೆ ಸುರಿಯುತ್ತಿದೆ.
ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳು ಈಗಾಗಲೇ ಜಲಾವೃತವಾಗುವ ಹಂತಕ್ಕೆ ಬಂದು ತಲುಪಿದ್ದು,ಶಾಲಾ ಕಾಲೇಜಿಗೆ ಹಾಗೂ ಕಚೇರಿಗೆ ತೆರಳುವಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.