Tuesday, August 16, 2022

Latest Posts

ನವೆಂಬರ್ 1ವರೆಗೂ ಕರ್ನಾಟಕ, ಕೇರಳ, ಆಂಧ್ರ, ತಮಿಳುನಾಡಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಮುಂದಿನ ನವೆಂಬರ್ 1ವರೆಗೂ ಕರ್ನಾಟಕ ಸೇರಿದಂತೆ ಕೇರಳ, ಪುದುಚೆರಿ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 31 ರವರೆಗೆ ಕರಾವಳಿ ಆಂಧ್ರಪ್ರದೇಶದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅ. 31 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮತ್ತು ಅ. 29-30 ರಂದು ರಾಯಲಸೀಮೆಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಮದು ಹವಾಮಾನ ಇಲಾಖೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ತಮಿಳುನಾಡಿನ ಕೆಲವು ಸ್ಥಳಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 1ರವರೆಗೆ ಕೇರಳ ಮತ್ತು ಮಾಹೆಯಲ್ಲಿಯೂ ಮಳೆಯಾಗಲಿದೆ. ಅಕ್ಟೋಬರ್ 30ರಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದದಾಗಿ ಮಳೆಯಾಗುತ್ತಿದ್ದು, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಾಲ್ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ  ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss