August 13, 2026
Thursday, August 13, 2026
spot_img

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜು.1)ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಕಾಸರಗೋಡು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ನೀಡಲಾಗಿದೆ.

ಯಾವೆಲ್ಲ ಸಂಸ್ಥೆಗಳಿಗೆ ರಜೆ?

ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು, ಟ್ಯೂಷನ್ ಕೇಂದ್ರಗಳು, ಮದರಸೆಗಳು, ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ ಕೇಂದ್ರ ಪಠ್ಯಕ್ರಮದ ಶಾಲೆಗಳು.

ಆದರೆ ವಸತಿ ಶಾಲೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !