ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಒಂದು ವಾರದೊಳಗೆ 10,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.
ಕೇರಳದ ಎರ್ನಾಕುಲಂನ ಕನ್ನಮಲಿ ಮುಂತಾದ ಕಡೆಗಳಲ್ಲಿ ಸಮುದ್ರ ಮಟ್ಟ ಏರುತ್ತಿರುವ ಕಾರಣದಿಂದಾಗಿ ಕರಾವಳಿ ನಿವಾಸಿಗಳ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೆಲವೆಡೆ ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ಭಾರೀ ಮಳೆಯಿಂದಾಗಿ ಕೇರಳದಾದ್ಯಂತ 10,000 ಜನರು ನಿರಾಶ್ರಿತರಾಗಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕೆಎಸ್‌ಡಿಎಂಎ) ಅಧಿಕಾರಿ ತಿಳಿಸಿದ್ದಾರೆ. ಈವರೆಗೆ 1,100 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಅಧಿಕಾರಿ ಹೇಳಿದ್ದಾರೆ.
ಈ ನಡುವೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‌ಡಿಎಂಎ) ಶನಿವಾರ ಸಂಜೆಯವರೆಗೆ ದಕ್ಷಿಣ ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 19 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದೆ.