Monday, August 8, 2022

Latest Posts

ದೇವರ ನಾಡಿನಲ್ಲಿ ವರುಣ ತಾಂಡವ: 13ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಳೆಯ ಆರ್ಭಟ ಕೇರಳ ರಾಜ್ಯದಲ್ಲಿ ಇದುವರೆಗೆ 13 ಮಂದಿಯನ್ನು ಬಲಿಪಡೆದಿದೆ. ಈ ನಡುವೆ ಕೇರಳದ ವಿವಿಧ ಜಿಲ್ಲೆಗಳಲ್ಲಿ ಆ.೫ರ ವರೆಗೆ ಇನ್ನಷ್ಟು ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಮಳೆ ತೀವ್ರತೆ ಕಡಿಮೆಯಾಗುತ್ತಿದ್ದರೂ, ನದಿಗಳಲ್ಲಿ ನೀರಿನ ಪ್ರಮಾಣ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ರಾಜ್ಯದ ಏಳು ಅಣೆಕಟ್ಟು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಒಟ್ಟು 95 ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದ್ದು, 2291 ಮಂದಿಯನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss